ಧರ್ಮೋಪದೇಶಕಾಂಡ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು. ಅಧ್ಯಾಯವನ್ನು ನೋಡಿ |
ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.