Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವತ್ತಿಗೆ ಸೇರಿ ನೀವು ಇನ್ನೂ ವಿಶ್ರಾಂತಿ ಹೊಂದಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ, ನೀವು ಇನ್ನು ವಿಶ್ರಾಂತಿಹೊಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವಾಸ್ತ್ಯಕ್ಕೆ ಸೇರಿ ನೀವು ಇನ್ನು ವಿಶ್ರಾಂತಿ ಹೊಂದಲಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ವಿಶ್ರಾಂತಿಗೂ, ಸೊತ್ತಿಗೂ ನೀವು ಇನ್ನೂ ಸೇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:9
12 ತಿಳಿವುಗಳ ಹೋಲಿಕೆ  

“ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.


ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.


ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.


ಏಳಿರಿ, ತೊಲಗಿರಿ, ಈ ದೇಶವು ನಿಮ್ಮ ಸುಖವಸತಿಯಾಗದು. ನಾಶನವನ್ನು, ವಿಪರೀತ ನಾಶನವನ್ನು ಉಂಟುಮಾಡುವ ಹೊಲಸು ಇದಕ್ಕೆ ಅಂಟಿಕೊಂಡಿದೆ.


ಇಸ್ರಾಯೇಲಿನ ದೇವರಾದ ಯೆಹೋವನು, ತನ್ನ ಪ್ರಜೆಗಳಿಗೆ ವಿಶ್ರಾಂತಿಯನ್ನು ಅನುಗ್ರಹಿಸಿ, ಆತನು ಸದಾಕಾಲವೂ ಯೆರೂಸಲೇಮಿನಲ್ಲಿ ವಾಸಿಸುವವನಾದುದರಿಂದ,


ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.


ಅದಲ್ಲದೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಗೊಂಡು ನಾನು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ಒಳ್ಳೆಯ ದೇಶವನ್ನು ಸೇರದೆ,


ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಕರ್ತನಾದ ಯೆಹೋವನು, “ಖಡ್ಗಕ್ಕೆ ಹತರಾಗದೆ ಉಳಿದ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯುವುದು; ಇಸ್ರಾಯೇಲ್ ವಿಶ್ರಾಂತಿಯನ್ನು ಹುಡುಕುವುದಕ್ಕೆ ಹೋಗುವಾಗ ಯೆಹೋವನು ದೂರದಿಂದ ಬಂದು ಅದಕ್ಕೆ ದರ್ಶನಕೊಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು