Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:10
15 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.


ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.


“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.


ಆಗ ಆ ಪುರುಷನನ್ನಾಗಲಿ ಅಥವಾ ಸ್ತ್ರೀಯನ್ನಾಗಲಿ ಹಿಡಿದು ಊರ ಹೊರಗೆ ತಂದು ಕಲ್ಲೆಸೆದು ಕೊಲ್ಲಬೇಕು.


ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು