Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯವು ಇಸ್ರಾಯೇಲ್ಯರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀವು ಇಂಥ ಸುದ್ದಿಯನ್ನು ಕೇಳಿದರೆ, ಅದು ಸತ್ಯವೇ ಎಂಬುದನ್ನು ತಿಳಿದುಕೊಳ್ಳಲು ನಿಮ್ಮಿಂದಾದಷ್ಟು ಪ್ರಯತ್ನಿಸಬೇಕು. ಅದು ಸತ್ಯವೆಂಬುದು ನಿಮಗೆ ತಿಳಿದುಬಂದರೆ ಮತ್ತು ಅಂಥ ಭಯಂಕರ ಸಂಗತಿಯು ನಿಜವಾಗಿಯೂ ಸಂಭವಿಸಿತೆಂದು ನೀವು ರುಜುವಾತುಪಡಿಸಲು ಶಕ್ತರಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀವು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು. ಆ ಕಾರ್ಯವು ನಿಶ್ಚಯವಾಗಿ ಸತ್ಯವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:14
10 ತಿಳಿವುಗಳ ಹೋಲಿಕೆ  

ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,


ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.


ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.


ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.


ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.


ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,


ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.


ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು