Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅದರಲ್ಲಿ ಇರುವ ಎಲ್ಲ ಜನರನ್ನೂ ಜಾನುವಾರುಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಿ ಅದರಲ್ಲಿರುವ ಎಲ್ಲಾ ಜನರನ್ನೂ ದನಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಊರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅದನ್ನೂ, ಅದರಲ್ಲಿರುವ ಎಲ್ಲದನ್ನೂ, ಅದರ ಪಶುಗಳನ್ನೂ ಸಹ ಶಪಿಸಿ ಖಡ್ಗದಿಂದ ನಿರ್ಮೂಲ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:15
17 ತಿಳಿವುಗಳ ಹೋಲಿಕೆ  

ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.


“‘ಯಾವನಾದರೂ ಮನುಷ್ಯನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ ಅಥವಾ ಬೇರೆ ಯಾವುದನ್ನಾಗಲಿ ಯಾವ ಷರತ್ತೂ ಇಲ್ಲದೆ ಸಂಪೂರ್ಣವಾಗಿ ಯೆಹೋವನದಾಗಿರುವುದಕ್ಕೆ ಹರಕೆಮಾಡಿ ಕೊಟ್ಟರೆ, ಅದನ್ನು ಮಾರಲೂ ಬಾರದು, ಬಿಡಿಸಿಕೊಳ್ಳಲೂ ಬಾರದು. ಕೇವಲ ಯೆಹೋವನದಾಗಿರುವುದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.


ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.


ಇಸ್ರಾಯೇಲರು ಪುನಃ ಹಿಂತಿರುಗಿ ಬಂದು ಬೆನ್ಯಾಮೀನ್ ದೇಶದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ, ದನಕುರಿಗಳನ್ನೂ, ಸಿಕ್ಕಿದ್ದೆಲ್ಲವನ್ನು ಸಂಹರಿಸಿ ಎಲ್ಲಾ ಊರುಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.


ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.


ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂತಹ ಅಸಹ್ಯಕಾರ್ಯವು ಇಸ್ರಾಯೇಲರಲ್ಲಿ ನಡೆದದ್ದು


ನೀವು ಆ ಸಂಗತಿಯನ್ನು ಕೇಳಿದಾಗ ಸೂಕ್ಷ್ಮವಾಗಿ ವಿಚಾರಣೆಯನ್ನು ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ನಿಷಿದ್ಧಕಾರ್ಯವು ನಡೆದದ್ದು ನಿಜವೆಂದು ತಿಳಿದು ಬಂದರೆ,


ಇಸ್ರಾಯೇಲರು ಕೂಡಿಕೊಂಡು ಮಿಚ್ಪೆಗೆ ಬಂದಿದ್ದಾರೆಂಬ ವರ್ತಮಾನವು ಬೆನ್ಯಾಮೀನ್ಯರಿಗೆ ಮುಟ್ಟಿತು. ಇಸ್ರಾಯೇಲರು, “ಈ ದುಷ್ಟತನವು ಹೇಗೆ ನಡೆಯಿತೆಂದು ತಿಳಿಸಿರಿ” ಎಂದು ಕೇಳಲು


ಆದರೆ ಸೆರೆಯಿಂದ ಬಂದವರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕನಾದ ಎಜ್ರನೂ ಆಯಾ ಗೋತ್ರಗಳ ಪ್ರಧಾನಪುರುಷರನ್ನು ಹೆಸರುಹೆಸರಾಗಿ ನೇಮಿಸಿದನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಇವರ ಮೊದಲನೆಯ ಸಭೆ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು