ಧರ್ಮೋಪದೇಶಕಾಂಡ 13:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿಮ್ಮ ದೇವರಾದ ಯೆಹೋವನು - ಇವರು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ ಎಂಬದನ್ನು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಂಥ ಮನುಷ್ಯನಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೋ ಇಲ್ಲವೋ ಎಂದು ನಿಮ್ಮನ್ನು ಪರೀಕ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.