Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:6
50 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಿದ್ದುದರಿಂದ ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.


ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.


ದಾವೀದನು ಸೌಲನೊಡನೆ ಮಾತನಾಡಿ ಮುಗಿಸಿದ ಮೇಲೆ ಯೋನಾತಾನನ ಪ್ರಾಣವು ದಾವೀದನ ಪ್ರಾಣದೊಡನೆ ಒಂದಾಯಿತು. ಅವನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.


“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.


ನಿಮ್ಮಲ್ಲಿ ಮೃದುಸ್ವಭಾವಿಯೂ ಮತ್ತು ಸೂಕ್ಷ್ಮಗುಣವುಳ್ಳವನು ಆಗಿರುವ ಸಹೋದರನು ಆಹಾರಕ್ಕಾಗಿ ತನ್ನ ಸಹೋದರ, ಪ್ರೀತಿಯ ಹೆಂಡತಿ ಮತ್ತು ತನ್ನ ಮಕ್ಕಳನ್ನು ದ್ವೇಷಿಸುವನು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.


ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ.


ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ಸಹೋದರರು ನಮ್ಮನ್ನು ಧರ್ಮಶಾಸ್ತ್ರದ ದಾಸತ್ವದಲ್ಲಿ ಸಿಕ್ಕಿಸಬೇಕೆಂದು, ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.


ಹೃದಯವು ಮರುಳುಗೊಂಡು, ಕೈಯನ್ನು ಬಾಯಿ ಮುದ್ದಾಡಿದ್ದರೆ,


ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.


ಅವರು ಯೆಹೋವನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದರು.


ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.


ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?


ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.


“ಈ ದೇವತೆಗಳನ್ನು ಅವಲಂಬಿಸಿ ಅವುಗಳನ್ನು ಸೇವಿಸೋಣ” ಎಂದು ಬೋಧಿಸುತ್ತಾ, ಆ ಬೋಧನೆಯನ್ನು ಸ್ಥಾಪಿಸುವುದಕ್ಕೆ ಒಂದು ಅದ್ಭುತವನ್ನಾಗಲಿ ಅಥವಾ ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಿ ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು.


ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ


ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು


ತರುವಾಯ ಜನರೆಲ್ಲರೂ ಬಾಳನ ಕ್ಷೇತ್ರಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಯಜ್ಞವೇದಿಗಳ ಎದುರಿನಲ್ಲಿಯೇ ಕೊಂದುಹಾಕಿದನು; ಆ ಕ್ಷೇತ್ರವನ್ನೂ ಅದರಲ್ಲಿದ್ದ ಯಜ್ಞವೇದಿ ಹಾಗೂ ವಿಗ್ರಹಗಳನ್ನೂ ಒಡೆದುಹಾಕಿ ಹಾಳುಮಾಡಿ ಬಿಟ್ಟರು.


ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.


ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.


ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು.


ಆಗ ಊರಿನವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲರೆಲ್ಲರೂ ಇದನ್ನು ಕೇಳಿ ಭಯಪಡುವರು.


ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.


ಈಗ ಗಿಬೆಯ ಊರಲ್ಲಿರುವ ಆ ದುಷ್ಟರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಾಯೇಲರ ಮಧ್ಯದಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು