Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾಗಿದ್ದರೂ ದೂರವಾದವರ ದೇವರುಗಳಾಗಿದ್ದರೂ ಭೂಲೋಕದ ಯಾವ ಭಾಗದವರ ದೇವರುಗಳಾಗಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಅಂತರಂಗದಲ್ಲಿ ನಿಮಗೆ ಬೋಧಿಸಿದರೆ ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ ದೂರವಾದವರ ದೇವರುಗಳಾದರೂ ಭೂಲೋಕದ ಯಾವ ಭಾಗದವರ ದೇವರುಗಳಾದರೂ ನೀವು ಸಮ್ಮತಿಸಲೂಬಾರದು ಕಿವಿಗೊಡಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವು ನಿಮ್ಮ ಸುತ್ತಮುತ್ತಲಿರುವ ಬೇರೆ ದೇಶಗಳಲ್ಲಿ ವಾಸವಾಗಿರುವ ಜನರ ದೇವರುಗಳು, ಅವುಗಳಲ್ಲಿ ಕೆಲವು ಹತ್ತಿರದವುಗಳಾಗಿವೆ; ಕೆಲವು ದೂರದವುಗಳಾಗಿವೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮಗೆ ಸಮೀಪವಾಗಲಿ, ನಿಮಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯವರೆಗೆ ನಿಮ್ಮ ಸುತ್ತಲಿರುವ ಜನರ ದೇವರುಗಳನ್ನು ಸೇವಿಸೋಣ,” ಎಂದು ನಿಮ್ಮನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:7
7 ತಿಳಿವುಗಳ ಹೋಲಿಕೆ  

ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,


ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.


ಆದುದರಿಂದ ಯೆಹೋವನು ಮೋಶೆಗೆ, “ನೀನು ಜನರ ಮುಖಂಡರೆಲ್ಲರನ್ನೂ ಹಿಡಿಸಿ ಅವರನ್ನು ಯೆಹೋವನಿಗೋಸ್ಕರ ಬಹಿರಂಗವಾಗಿ ಕೊಲ್ಲಿಸಬೇಕು. ಹೀಗೆ ಯೆಹೋವನ ಕೋಪಾಗ್ನಿಯನ್ನು ಇಸ್ರಾಯೇಲರಿಂದ ತೊಲಗಿಸಬೇಕು” ಎಂದು ಹೇಳಿದನು.


ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು, ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಮಾರ್ಗದಲ್ಲೇ ನಡೆದನು.


“ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಹಾಕುತ್ತಿದ್ದರೆಂದು ತಿಳಿದುಕೊಂಡಿದ್ದ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು ಅಂತು ಐಗುಪ್ತದಲ್ಲಿಯೂ, ಪತ್ರೋಸಿನಲ್ಲಿಯೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ” ಹೀಗೆ ಹೇಳಿದರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು