Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀವು ಸಮ್ಮತಿಸಲೂ ಬಾರದು; ಕಿವಿಗೊಡಲೂ ಬಾರದು. ಅಂಥವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಬದಲಿಗೆ ಕೊಲ್ಲಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಕೊಲ್ಲಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಎಂದರೆ ಆ ವ್ಯಕ್ತಿಯ ಸಲಹೆಗೆ ನೀವು ಒಪ್ಪಬಾರದು. ಅವನಿಗೆ ಕಿವಿಗೊಡಬೇಡಿ; ಅವನಿಗೆ ಕನಿಕರತೋರಬೇಡಿ; ಅವನು ಸ್ವತಂತ್ರನಾಗಿ ಹೋಗಲು ಬಿಡಬೇಡಿ; ಅವನನ್ನು ಸಂರಕ್ಷಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 13:8
13 ತಿಳಿವುಗಳ ಹೋಲಿಕೆ  

ಮಗನೇ, ಪಾಪಿಗಳು ದುಷ್ಪ್ರೇರಣೆಯನ್ನು ಮಾಡಿದರೆ ನೀನು ಒಪ್ಪಲೇ ಬೇಡ.


ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.


ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ, ಅಸಹ್ಯ ವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ನಿನ್ನನ್ನು ಕುಂದಿಸುವೆನು, ನಾನು ನಿನಗೆ ಕರುಣೆ ತೋರಿಸೆನು, ಕಟಾಕ್ಷಿಸೆನು.


ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.


ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.


ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.


ಇಸ್ರಾಯೇಲರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ, ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಯೆಹೋವನನ್ನು ಮರೆತು ಆತನನ್ನು ಆರಾಧಿಸುವುದನ್ನು ಬಿಟ್ಟೇಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು