Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:2
23 ತಿಳಿವುಗಳ ಹೋಲಿಕೆ  

ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.


ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ, ಆತನು ವಾಗ್ದಾನಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.


ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.


ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


“ನರಪುತ್ರನೇ, ನೀನು ಯೆರೂಸಲೇಮಿನ ಅಭಿಮುಖನಾಗಿ ಅಲ್ಲಿನ ಪವಿತ್ರ ಸ್ಥಾನಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶ ಕುರಿತು ಪ್ರವಾದಿಸಿ,


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.


ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.


ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,


ಇಸ್ರಾಯೇಲ್ ಯೆಹೋವನ ಬೆಳೆಯ ಪ್ರಥಮಫಲವಾಗಿ ಆತನಿಗೆ ಮೀಸಲಾಗಿತ್ತು; ಅದನ್ನು ತಿಂದವರೆಲ್ಲರೂ ದೋಷಿಗಳಾಗಿ ಕೇಡಿಗೆ ಗುರಿಯಾಗುವರು. ಇದು ಯೆಹೋವನು ನುಡಿ.’”


ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು