Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಸರ್ವೇಶ್ವರನಲ್ಲೇ ಯಾವಾಗಲು ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಧಾನ್ಯ, ದ್ರಾಕ್ಷೆ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವದನ್ನು ಅಭ್ಯಾಸಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷ ವಾಸಸ್ಥಾನವಾಗಿ ಯಾವ ಸ್ಥಳವನ್ನು ಆರಿಸಿಕೊಳ್ಳುತ್ತಾನೋ ಆ ಸ್ಥಳಕ್ಕೆ ನೀವು ಹೋಗಬೇಕು. ನಿಮ್ಮ ದೇವರಾದ ಯೆಹೋವನ ಜೊತೆಯಲ್ಲಿರುವುದಕ್ಕಾಗಿ ನೀವು ಅಲ್ಲಿಗೆ ಹೋಗಬೇಕು. ಆ ಸ್ಥಳದಲ್ಲಿ, ನೀವು ಬೆಳೆಯುವ ಬೆಳೆಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಧಾನ್ಯಗಳಲ್ಲಿ ಹತ್ತನೆ ಒಂದು ಭಾಗವನ್ನು, ನಿಮ್ಮ ಹೊಸ ದ್ರಾಕ್ಷಾರಸವನ್ನು, ನಿಮ್ಮ ಎಣ್ಣೆಯನ್ನು, ನಿಮ್ಮ ಹಿಂಡುಗಳ ಮತ್ತು ಮಂದೆಗಳ ಚೊಚ್ಚಲು ಪಶುಗಳನ್ನು ಯೆಹೋವನ ಪ್ರಸನ್ನತೆಯಲ್ಲಿ ತಿನ್ನಬೇಕು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಬೇಕೆಂಬುದನ್ನು ನೀವು ಯಾವಾಗಲೂ ಈ ರೀತಿಯಲ್ಲಿ ಜ್ಞಾಪಕ ಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:23
12 ತಿಳಿವುಗಳ ಹೋಲಿಕೆ  

ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.


ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.


ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.


ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.


ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ.


ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನಿಮ್ಮ ಕುಲಗಳಲ್ಲಿ ಯಾವುದೋ ಒಂದು ಕುಲದಲ್ಲಿ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ಸರ್ವಾಂಗಹೋಮಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸಿದ ಎಲ್ಲಾ ಆಚಾರಗಳನ್ನು ನಡೆಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು