Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಷಿದ್ಧವಾಗಿರುವ ಯಾವದನ್ನೂ ನೀವು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯೆಹೋವನು ಅಸಹ್ಯಪಡುವ ವಸ್ತುಗಳನ್ನು ನೀವು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಸಹ್ಯವಾದ ಯಾವುದನ್ನಾದರೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:3
10 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,


ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.


“‘ನೀವು ಶುದ್ಧ ಮತ್ತು ಅಶುದ್ಧ ಪಶುಗಳನ್ನು ಹಾಗು ಪಕ್ಷಿಗಳನ್ನು ಪ್ರತ್ಯೇಕಿಸುವ ವಿವೇಚನೆ ಹೊಂದಿರಬೇಕು. ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪಶು, ಪಕ್ಷಿ ಹಾಗು ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಅಸಹ್ಯಮಾಡಿಕೊಳ್ಳಬಾರದು.


ನೀವು ಅಂತಹ ಯಾವ ಸಣ್ಣ ಜೀವಿಯನ್ನು ತಿಂದು ನಿಮ್ಮನ್ನು ನೀವೇ ಹೇಸಿಗೆಮಾಡಿಕೊಂಡು ಅಶುದ್ಧರಾಗಬಾರದು.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.


ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.


ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.


“ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು