ಧರ್ಮೋಪದೇಶಕಾಂಡ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವುಗಳು ಮೆಲುಕು ಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕುಹಾಕುವದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ದೃಷ್ಟಾಂತ - ಒಂಟೆ, ಮೊಲ, ಬೆಟ್ಟದ ಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಒಂಟೆ, ಮೊಲ, ಬೆಟ್ಟದ ಮೊಲ ಇವುಗಳನ್ನು ತಿನ್ನಬಾರದು. ಈ ಪ್ರಾಣಿಗಳು ಮೆಲುಕು ಹಾಕುತ್ತವೆ ಆದರೆ ಅವುಗಳ ಗೊರಸು ಸೀಳಿಲ್ಲ. ಆದ್ದರಿಂದ ಅವುಗಳು ಶುದ್ಧಪ್ರಾಣಿಗಳಲ್ಲ. ನೀವು ಅವುಗಳನ್ನು ಆಹಾರವಾಗಿ ಉಪಯೋಗಿಸಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವು ಮೆಲುಕು ಹಾಕುವಂಥವುಗಳಾದರೂ, ಸೀಳುಗೊರಸು ಇಲ್ಲವಾದದ್ದರಿಂದ ಅವು ನಿಮಗೆ ಅಶುದ್ಧ. ಅಧ್ಯಾಯವನ್ನು ನೋಡಿ |