Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹಂದಿಯ ಗೊರಸು ಸೀಳಿದ್ದರೂ ಅದು ಮೆಲುಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವದಿಲ್ಲವಾದದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಹಂದಿಗಳನ್ನು ತಿನ್ನಬಾರದು. ಅವುಗಳ ಗೊರಸುಗಳು ಸೀಳಿವೆ; ಆದರೆ ಅವುಗಳು ಮೆಲುಕು ಹಾಕುವುದಿಲ್ಲ. ಆದ್ದರಿಂದ ಹಂದಿಯು ನಿಮಗೆ ಶುದ್ಧ ಆಹಾರವಾಗುವುದಿಲ್ಲ; ಹಂದಿಯ ಹೆಣವನ್ನೂ ನೀವು ಮುಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಂದಿಯನ್ನು ತಿನ್ನಬಾರದು. ಏಕೆಂದರೆ ಅದು ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲ. ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ನೀವು ತಿನ್ನಬಾರದು, ಅವುಗಳ ಹೆಣವನ್ನು ಮುಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:8
10 ತಿಳಿವುಗಳ ಹೋಲಿಕೆ  

“ನಾಯಿ ತಾನು ಕಕ್ಕಿದ್ದನ್ನು ನೆಕ್ಕುವುದಕ್ಕೆ ತಿರುಗಿಕೊಂಡಿತು. ಮತ್ತು ಮೈತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವುದಕ್ಕೆ ಹೋಯಿತು.” ಎಂಬ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.


ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಗೋರಿಗಳಲ್ಲಿ ಕುಳಿತುಕೊಳ್ಳುತ್ತಾ, ಗುಪ್ತಸ್ಥಳಗಳಲ್ಲಿ ರಾತ್ರಿ ಕಳೆಯುತ್ತಾ, ಹಂದಿಯ ಮಾಂಸವನ್ನು ತಿನ್ನುತ್ತಾ, ಅಸಹ್ಯ ಪದಾರ್ಥಗಳ ಸಾರನ್ನು ತಮ್ಮ ಪಾತ್ರೆಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರುತ್ತಾರೆ.


ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಮತ್ತು ಜಂತು ಇವುಗಳ ಹೆಣವಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ, ದೇವರು ಅದನ್ನು ಅಶುದ್ಧ ಎಂದು ಪರಿಗಣಿಸುವುದರಿಂದ ಅವನಿಗೆ ತಿಳಿಯದೆ ಹೋದರೂ ಅವನು ಅಶುದ್ಧನೂ ಮತ್ತು ದೋಷಿಯೂ ಆಗಿರುವನು.


ಅವು ಯಾವುವೆಂದರೆ ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.


ಆದರೆ ಯಾವ ಪ್ರಾಣಿಯು ಮೆಲಕುಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲಕು ಹಾಕುವುದಿಲ್ಲವೋ, ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆ: ಒಂಟೆ, ಮೊಲ, ಬೆಟ್ಟದಮೊಲ ಇವುಗಳು ಮೆಲಕುಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.


ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು