Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯ ಮಾಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:11
17 ತಿಳಿವುಗಳ ಹೋಲಿಕೆ  

ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.


ಬಡವರು ಯಾವಾಗಲೂ ನಿಮ್ಮೊಂದಿಗೆ ಇರುತ್ತಾರಲ್ಲಾ, ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ.


ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.


ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು.


ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.


ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.


ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು.


ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.


ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,


ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು