Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನೆಂಬದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:15
17 ತಿಳಿವುಗಳ ಹೋಲಿಕೆ  

ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಹಿಂಡು, ದವಸ, ದ್ರಾಕ್ಷಿ ಆಲೆ ಮತ್ತು ಕಣ ಇವುಗಳಲ್ಲಿ ಉದಾರವಾಗಿ ಕೊಟ್ಟು ಕಳುಹಿಸಿಬಿಡಬೇಕು.


ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,


ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.


“ಇಗೋ, ಮುಂದಿನ ಕಾಲದಲ್ಲಿ ಜನರು, ‘ಇಸ್ರಾಯೇಲರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂಬುದಾಗಿ ಪ್ರಮಾಣಮಾಡುವುದನ್ನು ಬಿಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು