Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ಆ ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು. ಆ ದಿನ ಮೊದಲ್ಗೊಂಡು ಅವನು ನಿಮಗೆ ಶಾಶ್ವತ ಗುಲಾಮನಾಗಿರುತ್ತಾನೆ. ಅದೇ ರೀತಿಯಲ್ಲಿ ಗುಲಾಮಸ್ತ್ರೀಯರ ವಿಷಯದಲ್ಲೂ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ದಿನ ಮೊದಲುಗೊಂಡು ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಲ್ಲಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ದಬ್ಬಳವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಿಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿಮ್ಮ ದಾಸನಾಗಿರುವನು. ನಿಮ್ಮ ದಾಸಿಗೂ ಹಾಗೆಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:17
6 ತಿಳಿವುಗಳ ಹೋಲಿಕೆ  

“ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.


ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,


ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.


ಒಂದು ವೇಳೆ ಆ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು, ನಿಮ್ಮನ್ನೂ ಮತ್ತು ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆಯಾಗಿ ಹೋಗುವುದಿಲ್ಲ ಎಂದು ಹೇಳುವ ಪಕ್ಷಕ್ಕೆ,


ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು