Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು - ಬಿಡುಗಡೆಯುಂಟಾಗುವ ಏಳನೆಯ ವರುಷವು ಸಮೀಪವಾಯಿತೆಂದು ನೀಚವಾದ ಆಲೋಚನೆಯನ್ನು ಮಾಡಿ ಆ ಬಡ ಸಹೋದರನ ವಿಷಯದಲ್ಲಿ ಮೋರೆ ಕರ್ರಗೆಮಾಡಿಕೊಂಡು ಏನೂ ಕೊಡದೆ ಇರಬಾರದು, ನೋಡಿರಿ. [ಹಾಗೆ ಧಿಕ್ಕರಿಸಿದರೆ] ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ತೋರಿಬಂದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:9
30 ತಿಳಿವುಗಳ ಹೋಲಿಕೆ  

ಏನೂ ಅನ್ಯಾಯಮಾಡದೆ ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಣುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರುನೋಡುತ್ತಾನಲ್ಲಾ. ನೀವು ಕೊಡದಿದ್ದರೆ ಅವನು ಯೆಹೋವನಿಗೆ ಮೊರೆಯಿಟ್ಟಾನು; ಆಗ ನೀವು ದೋಷಿಗಳಾಗಿ ಕಂಡುಬಂದೀರಿ.


ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.


ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.


ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.


ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.


ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.


ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?


ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.


ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.


ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವುದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು.


ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ


ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.


‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು