Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಕಣಗಳ ಕೆಲಸ ಮತ್ತು ದ್ರಾಕ್ಷಿಯ ಆಲೆಗಳ ಕೆಲಸ ಮುಕ್ತಾಯವಾಗಿ ನಿಮ್ಮ ಮನೆಗಳಲ್ಲಿ ಅವುಗಳನ್ನು ಶೇಖರಿಸಿದ ಬಳಿಕ ಏಳು ದಿನಗಳ ನಂತರ ನೀವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:13
14 ತಿಳಿವುಗಳ ಹೋಲಿಕೆ  

ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.


ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,


ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಒಟ್ಟಾಗಿ ಸೇರಿ ಬಂದರು.


ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಶಾಲೆಗಳ ಜಾತ್ರೆಯನ್ನು ಆಚರಿಸಿ, ಪ್ರತಿದಿನ ನಿಗದಿಪಡಿಸಿದ ವಿಧಿಗನುಸಾರವಾದ ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ


“ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.


ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.


ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು