Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇವಿುಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:18
22 ತಿಳಿವುಗಳ ಹೋಲಿಕೆ  

ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,


ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು.


ನಿಮ್ಮ ಹಿರಿಯರೂ ಮತ್ತು ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳುವುದಕ್ಕೆ ಅಳತೆಮಾಡಬೇಕು.


ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.


ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.


“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ಪ್ರತಿಯೊಬ್ಬನು ತನಗೆ ಯೆಹೋವನು ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತ್ಯಾನುಸಾರ ಕೊಡಬೇಕು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಾಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಆಕೆಯ ಪತಿಯು ನ್ಯಾಯಸ್ಥಾನದಲ್ಲಿ, ದೇಶದ ಹಿರಿಯರ ಮಧ್ಯದಲ್ಲಿ ಕುಳಿತಿರುವಾಗ ಪ್ರಸಿದ್ಧನಾಗಿ ಕಾಣುವನು.


ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.


ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ, ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು