Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೀವು ನ್ಯಾಯವನ್ನು ಮಾತ್ರ ಅನುಸರಿಸಬೇಕು. ಹಾಗೆ ನಡೆದರೆ, ನಿಮ್ಮ ದೇವರಾದ ಸರ್ವೇಶ್ವರ ಕೊಡುವ ನಾಡನ್ನು ಸ್ವಾಧೀನಮಾಡಿಕೊಂಡು ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಒಳ್ಳೆಯವರೂ ನ್ಯಾಯವಂತರೂ ಆಗಿದ್ದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ವಾಸಿಸುವಿರಿ ಮತ್ತು ಅದನ್ನು ನಿಮ್ಮ ವಶದಲ್ಲಿಟ್ಟುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು ಬದುಕಿ ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನ್ಯಾಯವನ್ನು ಅಂದರೆ ಕೇವಲ ನ್ಯಾಯವನ್ನೇ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:20
9 ತಿಳಿವುಗಳ ಹೋಲಿಕೆ  

ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು, ಸತ್ಯಪರನಾಗಿಯೇ ನಡೆದರೆ ಇಂಥವನು ಸದ್ಧರ್ಮಿಯಾಗಿರುವುದರಿಂದ ಖಂಡಿತವಾಗಿ ಜೀವಿಸುವನು” ಇದು ಕರ್ತನಾದ ಯೆಹೋವನ ನುಡಿ.


“ಒಬ್ಬನು ಸದ್ಧರ್ಮಿಯಾಗಿ ನೀತಿ ನ್ಯಾಯಗಳನ್ನು ನಡೆಸಿ,


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು