Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಬೆಳೆ ಕೊಯ್ಯವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲ್ಗೊಂಡು ಏಳು ವಾರಗಳನ್ನು ಎಣಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬೆಳೆ ಕೊಯ್ಯುವದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನಿಮ್ಮ ಹೊಲಗಳ ಬೆಳೆಯನ್ನು ಕೊಯ್ಯಲು ಪ್ರಾರಂಭಿಸಿದ ದಿನದಿಂದ ಏಳು ವಾರಗಳನ್ನು ಲೆಕ್ಕ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಳು ವಾರಗಳನ್ನು ನನಗಾಗಿ ಎಣಿಸಿಕೊಳ್ಳಬೇಕು. ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವುದಕ್ಕೆ ಪ್ರಾರಂಭಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:9
11 ತಿಳಿವುಗಳ ಹೋಲಿಕೆ  

“ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.


ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.


ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;


ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.


ಅದರಂತೆಯೇ ರೂತಳು ಅತ್ತೆಯ ಜೊತೆಯಲ್ಲಿದ್ದುಕೊಂಡು ಜವೆಗೋದಿಯ ಮತ್ತು ಗೋದಿಯ ಸುಗ್ಗಿ ಮುಗಿಯುವ ವರೆಗೆ ಬೋವಜನ ಹೆಣ್ಣಾಳುಗಳ ಸಂಗಡಲೇ ಹೋಗಿ ಹಕ್ಕಲಾಯುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು