ಧರ್ಮೋಪದೇಶಕಾಂಡ 17:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಾವುದೇ ಕುಂದುಕೊರತೆ ಅಥವಾ ಊನ ಇರುವ ಎತ್ತು ಮತ್ತು ಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವುದು ಆತನಿಗೆ ಅಸಹ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕುಂದು ಕೊರತೆಯಾಗಲಿ ಯಾವ ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಸಮರ್ಪಿಸುವದು ಆತನಿಗೆ ಅಸಹ್ಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ನಿಮ್ಮ ದೇವರಾದ ಯೆಹೋವನಿಗೆ ನೀವು ಪಶುಗಳನ್ನಾಗಲಿ ಆಡುಕುರಿಮರಿಗಳನ್ನಾಗಲಿ ಸಮರ್ಪಿಸುವಾಗ ಅವು ಕಳಂಕವಿಲ್ಲದೆ ಪೂರ್ಣಾಂಗವಾಗಿರಬೇಕು; ದೋಷಪೂರಿತ ಯಜ್ಞವನ್ನು ಆತನು ದ್ವೇಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ. ಅಧ್ಯಾಯವನ್ನು ನೋಡಿ |