ಧರ್ಮೋಪದೇಶಕಾಂಡ 17:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
12 ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆ ಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾರು ಅಹಂಕಾರದಿಂದ ನಿರಾಕರಿಸುತ್ತಾರೋ ಅವರಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.
12 ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆ ಆಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಯೇಲರ ಮಧ್ಯದಿಂದ ತೆಗೆದುಹಾಕಬೇಕು.
12 ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಾಯೇಲ್ಯರ ಮಧ್ಯದಿಂದ ತೆಗೆದುಹಾಕಬೇಕು.
12 “ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.
12 ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ಎಲ್ಲಾ ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿನಗಳೊಳಗೆ ಬಾರದವನು ತನ್ನ ಎಲ್ಲಾ ಆಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು” ಎಂದು ಪ್ರಕಟಿಸಿದರು.
ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ.
ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.
ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.
ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
ನಿನ್ನ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯ ಮಾಡಿದರೆ ನಿನ್ನ ವಿಧಿಗಳಿಗೆ ವಿರುದ್ಧವಾಗಿ ನಡೆದರೆ ಮರಣದಂಡನೆಗೆ ಗುರಿಯಾಗತಕ್ಕವನು; ಆದುದರಿಂದ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು” ಎಂದು ಹೇಳಿದರು.