Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ, “ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇಮಿಸಿಕೊಳ್ಳೋಣ” ಎಂದು ಹೇಳಿಕೊಳ್ಳುವ ಸಂದರ್ಭದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನಿಮ್ಮ ದೇವರಾದ ಸರ್ವೇಶ್ವರ, ನಿಮಗೆ ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿರುವಾಗ ‘ಸುತ್ತಲಿರುವ ಎಲ್ಲ ಜನಾಂಗಗಳಂತೆ ನಾವೂ ಒಬ್ಬ ಅರಸನನ್ನು ನೇಮಿಸಿಕೊಳ್ಳೋಣ’ ಎಂದು ಹೇಳಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಸೇರಿ ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ - ಸುತ್ತಲಿರುವ ಎಲ್ಲಾ ಜನಾಂಗಗಳಂತೆ ನಾವೂ ಅರಸನನ್ನು ನೇವಿುಸಿಕೊಳ್ಳೋಣ ಎಂದು ಹೇಳಿಕೊಳ್ಳುವ ಪಕ್ಷಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಪ್ರವೇಶಿಸುವಿರಿ. ಆ ಸ್ಥಳಗಳನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ನೆಲೆಸುವಿರಿ. ಆಗ ನೀವು ‘ನಮ್ಮ ಸುತ್ತಲಿನ ದೇಶದಲ್ಲಿರುವಂತೆಯೇ ನಮಗೂ ಒಬ್ಬ ರಾಜನು ಬೇಕು’ ಎಂದು ಹೇಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:14
17 ತಿಳಿವುಗಳ ಹೋಲಿಕೆ  

ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಸೇರಿಕೊಂಡಿತು; ಆದ್ದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ” ಎಂದು ವಿಜ್ಞಾಪಿಸಲು


“ಯೆಹೋವನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟು ವಿಶ್ರಾಂತಿ ನೀಡಿದ್ದಾನೆ.


ಅವನು ನಮ್ಮನ್ನು ಐಗುಪ್ತದೇಶದಿಂದ ಕರೆತಂದು ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿದ್ದಾನೆ.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.


“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,


ನಾನು ನಿಮಗೆ ಆ ದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.


ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.


ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.


ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು