Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡ ವ್ಯಕ್ತಿಯನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇಮಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಅಗತ್ಯವಾಗಿ ನಿಮ್ಮ ದೇವರಾದ ಯೆಹೋವನು ಆದುಕೊಂಡವನನ್ನೇ ನೇವಿುಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇವಿುಸಿಕೊಳ್ಳಬೇಕೇ ಹೊರತು ಅನ್ಯದೇಶದವನನ್ನು ನೇವಿುಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಂಥ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:15
16 ತಿಳಿವುಗಳ ಹೋಲಿಕೆ  

ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”


ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.


ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;


ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.


“ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.


ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.


ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗನಾದ ಸೊಲೊಮೋನನನ್ನು ಯೆಹೋವನ ರಾಜ್ಯ ಸಿಂಹಾಸನವಾಗಿರುವ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೋಸ್ಕರ ಆರಿಸಿಕೊಂಡನು.


ಅವನಿಗೆ, “ನೀನಂತೂ ಮುದುಕನಾದಿ; ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುತ್ತಿಲ್ಲ. ಆದ್ದರಿಂದ ಬೇರೆ ಎಲ್ಲಾ ಜನಾಂಗಗಳಿಗೆ ಇರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿಕೊಡು. ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ” ಅಂದರು.


ಆ ನಂತರ ನೀನು ಮಾಡಬೇಕಾದದ್ದನ್ನು ನಾನೇ ನಿನಗೆ ತಿಳಿಸುತ್ತೇನೆ. ನಾನು ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ಅಭಿಷೇಕಿಸಬೇಕು” ಎಂದನು.


ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,


ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು