Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಕೊಂಡುಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಬಾರದು ಎಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಕುದುರೆಯ ದಂಡನ್ನು ಕೂಡಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವದಕ್ಕಾಗಿ ತನ್ನ ಪ್ರಜೆಗಳನ್ನು ಐಗುಪ್ತದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಯೆಹೋವನು ಆಜ್ಞಾಪಿಸಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:16
23 ತಿಳಿವುಗಳ ಹೋಲಿಕೆ  

ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”


ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.


ಇಸ್ರಾಯೇಲ್ ಐಗುಪ್ತ ದೇಶಕ್ಕೆ ಹಿಂದಿರುಗದು; ಅದು ನನ್ನ ಕಡೆಗೆ ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.


ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.


ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.


ಆನಂತರ ಹಗ್ಗೀತಳ ಮಗನಾದ ಅದೋನೀಯನು, “ನಾನೇ ಅರಸನಾಗತಕ್ಕವನು” ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.


ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.


ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.


ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.


“ಅರಸನಿಗಿರುವ ಅಧಿಕಾರವೆಷ್ಟೆಂದು ಕೇಳಿರಿ, ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು. ಅವರು ಅವನ ರಥಗಳ ಮುಂದೆ ಓಡುವವರಾಗಬೇಕು.


ಸೊಲೊಮೋನನು ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.


ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.


ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ್ಯ ದೇಶದವುಗಳಾಗಿದ್ದವು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.


ಅವರ ದೇಶವು ಬೆಳ್ಳಿಬಂಗಾರಗಳಿಂದ ತುಂಬಿದೆ. ಅವರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲ. ಅವರ ದೇಶವು ಅಶ್ವಬಲದಿಂದ ತುಂಬಿದೆ. ಅವರ ರಥಗಳಿಗೆ ಮಿತಿಯೇ ಇಲ್ಲ.


“ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು, ‘ಐಗುಪ್ತಕ್ಕೆ ಹೋಗಬೇಡಿರಿ’ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿನ ಆ ಮಾತನ್ನು ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.


ಯೆಹೋವನು ಇಂತೆನ್ನುತ್ತಾನೆ, “ಆ ದಿನಗಳಲ್ಲಿ ನಿನ್ನ ಕುದುರೆಗಳನ್ನು ನಿನ್ನೊಳಗಿಂದ ಕಡಿದುಬಿಡುವೆನು. ನಿನ್ನ ರಥಗಳನ್ನು ನಾಶಗೊಳಿಸುವೆನು.


ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು