Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನೂ ಮತ್ತು ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ, ಇಸ್ರಾಯೇಲರ ನಡುವೆ ಬಾಳುವಂತೆಯೂ ಮತ್ತು ಅವನು ಮದದಿಂದ ತನ್ನ ಸ್ವದೇಶದವರನ್ನು ಹೀಯಾಳಿಸದಂತೆಯೂ ಅವನು ಯೆಹೋವನ ಆಜ್ಞೆಗಳನ್ನು ಅನುಸರಿಸಬೇಕು. ಅದನ್ನು ಮೀರಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೀಗಾದರೆ ಅವನೂ ಅವನ ಸಂತತಿಯವರೂ ಬಹುಕಾಲ ರಾಜ್ಯಾಧಿಕಾರವನ್ನು ನಡಿಸುತ್ತಾ ಇಸ್ರಾಯೇಲ್ಯರ ನಡುವೆ ಬಾಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 17:20
39 ತಿಳಿವುಗಳ ಹೋಲಿಕೆ  

ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.


ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ಆದರೆ ದುಷ್ಟನಿಗೆ ಒಳ್ಳೆಯದಾಗುವುದಿಲ್ಲ. ನೆರಳಿನಂತಿರುವ ಅವನ ದಿನಗಳು ಹೆಚ್ಚುವುದಿಲ್ಲ. ಏಕೆಂದರೆ ಅವನು ದೇವರಿಗೆ ಭಯಪಡುವುದಿಲ್ಲ.


ಸಂಪತ್ತು ಶಾಶ್ವತವಾಗಿರುವುದಿಲ್ಲವಷ್ಟೆ, ಕಿರೀಟವು ತಲತಲಾಂತರಗಳ ವರೆಗೆ ನಿಂತೀತೋ?


ಯೆಹೋವನಿಗೆ ಭಯಪಡುವವರ ದಿನಗಳಿಗೆ ವೃದ್ಧಿ, ದುಷ್ಟರ ವರ್ಷಗಳು ಅಲ್ಪ.


ನಿನ್ನ ಮಕ್ಕಳು ನನ್ನ ನಿಬಂಧನೆಯನ್ನೂ, ನಾನು ಆಜ್ಞಾಪಿಸಿದ ಕಟ್ಟಳೆಗಳನ್ನೂ ಕೈಕೊಂಡು ನಡೆಯುವುದಾದರೆ, ಅವರ ಮಕ್ಕಳು ನಿನ್ನ ಸಿಂಹಾಸನದಲ್ಲಿ ಸದಾಕಾಲ ಕುಳಿತುಕೊಳ್ಳುವರು.”


ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.


“ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ; ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಆದರೂ ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಠೆ. ಅಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾ ಅಪರಾಧಿಯಾದನು.


ಅವನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಅವನಿಗೆ ದೊರಕಿದ ಸದುತ್ತರವೂ, ಅವನು ತನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ ಮೊದಲು ಮಾಡಿದ ಅಪರಾಧದ್ರೋಹಗಳೂ, ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ನಿರ್ಮಿಸಿ ಅಶೇರ ಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಕರ ಚರಿತ್ರೆಯಲ್ಲಿ ಬರೆದಿರುತ್ತವೆ.


ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು


ಆದರೆ ಅವನು ಬಲಿಷ್ಠನಾದ ಮೇಲೆ ಅವನ ಅವನತಿಗಾಗಿ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಗೆ ಪ್ರವೇಶಿಸಿದನು.


ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.


ನೀನು ಎದೋಮ್ಯರನ್ನು ಸೋಲಿಸಿದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನದು ಸುಮ್ಮನೆ ಮನೆಯಲ್ಲಿ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ, ನಿನ್ನ ರಾಜ್ಯವಾದ ಯೆಹೂದದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ?” ಎಂದು ಉತ್ತರ ಕೊಟ್ಟುಕಳುಹಿಸಿದನು.


ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.


ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.


ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ, ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿಮಿತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ಅವಿಧೇಯತ್ವವು ಮಂತ್ರತಂತ್ರಗಳಷ್ಟೇ ಕೆಟ್ಟದ್ದಾಗಿರುವುದು. ಹಟವು ಮಿಥ್ಯಾಭಕ್ತಿಗೂ, ವಿಗ್ರಹಾರಾಧನೆಗೂ ಸಮಾನವಾಗಿರುವುದು. ನೀನು ಯೆಹೋವನ ಮಾತಿನಂತೆ ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಅರಸುತನದಿಂದ ನಿವಾರಿಸಿಬಿಟ್ಟಿದ್ದಾನೆ” ಎಂದು ಹೇಳಿದನು.


ಅವರು ಕಲಿಸಿಕೊಡುವ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತಿರುಗಬಾರದು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.


ನೀವು ಅದನ್ನು ತಿನ್ನದೆ ಯೆಹೋವನಿಗೆ ಮೆಚ್ಚಿಗೆಯಾಗಿರುವುದನ್ನು ನಡಿಸಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.


ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ.


ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.


ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು