Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 18:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು (ನಿಮಗೆ) ಏರ್ಪಡಿಸುವನು; ಅವನಿಗೇ ನೀವು ಕಿವಿಗೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ದೇವರು ನಿಮ್ಮ ಬಳಿಗೆ ಪ್ರವಾದಿಯನ್ನು ಕಳುಹಿಸುವನು. ಆ ಪ್ರವಾದಿಯು ನಿಮ್ಮ ಕುಲದವರಲ್ಲಿ ಒಬ್ಬನಾಗಿರುವನು. ಅವನು ನನ್ನ ಹಾಗೆ ಇರುವನು ಮತ್ತು ನೀವು ಅವನ ಮಾತುಗಳನ್ನು ಕೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 18:15
27 ತಿಳಿವುಗಳ ಹೋಲಿಕೆ  

“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.


ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.


ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.


ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.


ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.


ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.


ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಆ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು.


ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.


ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ,


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.


ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.


ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.


ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.


ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.


ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.


ಎಫ್ರಾಯೀಮು ಯೆಹೋವನನ್ನು ಅತಿ ತೀಕ್ಷ್ಣವಾಗಿ ರೇಗಿಸಿದೆ, ಆದಕಾರಣ ಅದರ ಒಡೆಯನು ಅದರ ರಕ್ತಾಪರಾಧವನ್ನು ಅದರ ಮೇಲೆ ಹೊರಿಸಿ, ಅದು ಮಾಡಿದ ಅವಮಾನವನ್ನು ಅದಕ್ಕೆ ಹಿಂದಿರುಗಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು