ಧರ್ಮೋಪದೇಶಕಾಂಡ 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಂದು ಇದನ್ನೇ ನೀವು ಕೋರಿಕೊಂಡಿರಿ; ‘ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ಇನ್ನು ಕೇಳಲು ಹಾಗು ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲು ನಮಗೆ ಮನಸ್ಸಿಲ್ಲ; ಹಾಗೇನಾದರು ಕೇಳಿ, ನೋಡಿದರೆ ಸತ್ತೇವು’ ಎಂದು ನೀವು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಲ್ಲಿ ಹಾಗೆಯೇ ಕೋರಿಕೊಂಡು - ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳಲೂ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲೂ ನಮಗೆ ಮನಸ್ಸಿಲ್ಲ; ಕೇಳಿ ನೋಡಿದರೆ ಸತ್ತೇವು ಎಂದು ನೀವು ಹೇಳಿದಿರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವು ಕೇಳಿದ ಪ್ರಕಾರ ದೇವರು ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವನು. ನೀವು ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಒಟ್ಟಾಗಿ ಸೇರಿದಾಗ ದೇವರ ಸ್ವರಕ್ಕೆ ಭಯಪಟ್ಟಿರಿ; ಪರ್ವತದಲ್ಲಿದ್ದ ಬೆಂಕಿಯನ್ನು ನೋಡಿಯೂ ತತ್ತರಿಸಿದಿರಿ. ಆಗ ನೀವು, ‘ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರುಗಿ ಕೇಳದ ಹಾಗೆ ಮಾಡು. ನಾವು ತಿರುಗಿ ಆ ಮಹಾ ಬೆಂಕಿಯ ಜ್ವಾಲೆಯನ್ನು ನೋಡದ ಹಾಗೆ ಮಾಡು; ಇಲ್ಲವಾದರೆ ನಾವು ಸಾಯುತ್ತೇವೆ!’ ಎಂದು ನನ್ನನ್ನು ಕೇಳಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಂದ ಬೇಡಿಕೊಂಡ ಪ್ರಕಾರ ಆಗುವುದು. ಆಗ ನೀವು, “ನಾವು ಸಾಯದಂತೆ ಇನ್ನು ಮೇಲೆ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ನಾವು ಕೇಳುವುದಿಲ್ಲ, ಈ ದೊಡ್ಡ ಬೆಂಕಿಯನ್ನೂ ನೋಡುವುದಿಲ್ಲ,” ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿ |