ಧರ್ಮೋಪದೇಶಕಾಂಡ 18:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಹೇಸಿಗೆ ಕೆಲಸಗಳನ್ನು ಅನುಸರಿಸಲೇಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನೀವು ನಿಮ್ಮ ವಾಗ್ದತ್ತ ದೇಶಕ್ಕೆ ಬಂದಾಗ ಸುತ್ತಮುತ್ತಲಿನ ಜನರು ನಡೆಯುವ ರೀತಿಯಲ್ಲಿ ನೀವು ನಡೆಯಬಾರದು. ಅವರ ಅಸಹ್ಯವಾದ ಪದ್ದತಿಗಳನ್ನು ಅನುಸರಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಆ ಜನಾಂಗಗಳು ಮಾಡುವ ಅಸಹ್ಯ ಕಾರ್ಯಗಳನ್ನು ನೀವು ಕಲಿಯಬಾರದು. ಅಧ್ಯಾಯವನ್ನು ನೋಡಿ |
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.