ಧರ್ಮೋಪದೇಶಕಾಂಡ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆಯಾದರೆ ಆ ದೋಷವು ನಿಮ್ಮದಾಗಿಯೇ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು. ಅಧ್ಯಾಯವನ್ನು ನೋಡಿ |