Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನನ್ನು ಇಸ್ರಾಯೇಲರಲ್ಲಿ ಉಳಿಯದಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲ್ಯರಲ್ಲಿ ಉಳಿಯದಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಅವನ ವಿಷಯದಲ್ಲಿ ದುಃಖಪಡಬಾರದು. ಯಾಕೆಂದರೆ ಅವನು ನಿರಪರಾಧಿಯನ್ನು ಕೊಂದ ಅಪರಾಧಿಯಾಗಿದ್ದಾನೆ. ಅವನು ಮಾಡಿದ ಪಾಪವನ್ನು ಇಸ್ರೇಲಿನಿಂದ ತೆಗೆದುಹಾಕಬೇಕು. ಆಗ ನಿಮಗೆ ಶುಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:13
17 ತಿಳಿವುಗಳ ಹೋಲಿಕೆ  

ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ಆಗ ಆ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.


ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.


ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.


ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’


ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.


ಅವನು ಅವಳನ್ನು ಕನಿಕರಿಸದೆ ಅವಳ ಕೈಯನ್ನು ಕಡಿದುಹಾಕಬೇಕು.


ನೀವು ಸಮ್ಮತಿಸಲೂ ಬಾರದು ಮತ್ತು ಕಿವಿಗೊಡಲೂಬಾರದು. ಅವನನ್ನು ಕನಿಕರಿಸಲೂಬಾರದು, ತಪ್ಪಿಸಲೂಬಾರದು, ಬಚ್ಚಿಡಲೂಬಾರದು ಅವನನ್ನು ಕೊಲ್ಲಿಸಲೇಬೇಕು.


ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.


“‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ಒಂದಕ್ಕೆ ಓಡಿಹೋದರೆ, ಅವನ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಒಪ್ಪಿಸಬೇಕು.


ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನೂ, ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ, ಕೈಗೆ ಪ್ರತಿಯಾಗಿ ಕೈಯನ್ನೂ ಮತ್ತು ಕಾಲಿಗೆ ಪ್ರತಿಯಾಗಿ ಕಾಲನ್ನೂ ತೆಗೆದುಬಿಡಬೇಕು.


ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.


“‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು