ಧರ್ಮೋಪದೇಶಕಾಂಡ 19:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವತ್ತಿನಲ್ಲಿ ನೆರೆಯವನ ಭೂಮಿಯ ಹಿಂದಿನ ಕಾಲದ ಗಡಿಯನ್ನು ಒತ್ತಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿಮ್ಮ ಪಾಲಿಗೆ ಬಂದ ಸ್ವಾಸ್ತ್ಯದಲ್ಲಿ ನೆರೆಯವನ ಭೂವಿುಯ ಪೂರ್ವಕಾಲದ ಮೇರೆಯನ್ನು ಒತ್ತಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು. ಅಧ್ಯಾಯವನ್ನು ನೋಡಿ |