ಧರ್ಮೋಪದೇಶಕಾಂಡ 19:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಆ ಮತ್ತೊಬ್ಬನಿಗೆ ಕೊಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಹೀಗೆ, ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.