Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ತಾನು ನಿಮ್ಮ ಪೂರ್ವಿಕರಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವಾಗ, ಇನ್ನೂ ಮೂರು ನಗರಗಳನ್ನು ನಿಮಗಾಗಿ ಗೊತ್ತುಮಾಡಬೇಕು. ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8-9 “ನಾನು ಈಗ ನಿಮಗೆ ಬೋಧಿಸುವ ಈ ಇಡೀ ಧರ್ಮೋಪದೇಶವನ್ನು ನೀವು ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರು ಹೇಳುವ ಮಾರ್ಗದಲ್ಲೇ ಯಾವಾಗಲು ನಡೆಯಬೇಕು. ಆಗ ಅವರು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವರು. ಆಗ ಈ ಮೂರು ನಗರಗಳಲ್ಲದೆ ಇನ್ನೂ ಮೂರು ನಗರಗಳನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8-9 ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆದರೆ ಆತನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ ತಾನು ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವನು. ಆಗ ಈ ಮೂರು ಪಟ್ಟಣಗಳನ್ನಲ್ಲದೆ ಇನ್ನು ಮೂರು ಪಟ್ಟಣಗಳನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ನಿಮ್ಮ ದೇಶವನ್ನು ವಿಸ್ತಾರ ಮಾಡುವುದಾಗಿ ವಾಗ್ದಾನ ಮಾಡಿದನು. ಅವರಿಗೆ ಕೊಡುವುದಾಗಿ ವಾಗ್ದಾನಮಾಡಿದ ದೇಶವನ್ನೆಲ್ಲಾ ನಿಮಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮ ಮೇರೆಯನ್ನು ವಿಸ್ತಾರಮಾಡಿ, ನಿಮ್ಮ ಪಿತೃಗಳಿಗೆ ಕೊಡುವುದಾಗಿ ಹೇಳಿದ ದೇಶವನ್ನೆಲ್ಲಾ ನಿಮಗೆ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:8
9 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು, “ನಾವು ಮಾಂಸಾಹಾರವನ್ನು ಊಟಮಾಡಬೇಕು” ಎಂದು ನೀವು ಇಷ್ಟಪಟ್ಟರೆ ಮಾಂಸಾಹಾರವನ್ನು ಮಾಡಬಹುದು.


ನಾನು ನಿಮ್ಮ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ನೀವು ವರ್ಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂಮಿಯನ್ನು ಆಶೆಪಟ್ಟು ಅಪಹರಿಸುವುದಿಲ್ಲ.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.


ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣ ಉತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನಿಂದಲೂ, ನಿನ್ನ ಸಂತತಿಯಿಂದಲೂ, ಭೂಮಿಯ ಎಲ್ಲಾ ಕುಲದವರು ಆಶೀರ್ವಾದ ಹೊಂದುವರು.


ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು