ಧರ್ಮೋಪದೇಶಕಾಂಡ 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿ. ನಾನು ಆ ನಾಡನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ನಿಮಗೆ ಅದರಲ್ಲಿ ಕಿಂಚಿತ್ತು ಭಾಗವನ್ನೂ ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಎಷ್ಟು ಭಾಗವನ್ನಾದರೂ ಕೊಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು. ಅಧ್ಯಾಯವನ್ನು ನೋಡಿ |