ಧರ್ಮೋಪದೇಶಕಾಂಡ 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಇಂದಿನಿಂದ ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಎಲ್ಲರೂ ಗಡಗಡನೆ ನಡುಗಿ ಸಂಕಟಪಡುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಲೋಕದಲ್ಲಿರುವ ಎಲ್ಲಾ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಇಂದಿನಿಂದ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು. ಅಧ್ಯಾಯವನ್ನು ನೋಡಿ |