Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ‘ನೀವು ಈ ಮಲೆನಾಡನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಈ ಬೆಟ್ಟದ ಸೀಮೆಯನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿರಿ. ಮತ್ತು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ‘ನೀವು ಬೆಟ್ಟದ ಸುತ್ತ ಸುತ್ತುತ್ತಾ ಬಹಳ ದಿವಸಗಳನ್ನು ಕಳೆದಿರಿ. ಈಗ ನೀವು ಉತ್ತರದಿಕ್ಕಿಗೆ ತಿರುಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನೀವು ಈ ಬೆಟ್ಟವನ್ನು ಸುತ್ತಿದ್ದು ಸಾಕು. ಉತ್ತರಕ್ಕೆ ತಿರುಗಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:3
6 ತಿಳಿವುಗಳ ಹೋಲಿಕೆ  

“ಹೋರೇಬಿನಲ್ಲಿ ನಮ್ಮ ದೇವರಾದ ಯೆಹೋವನು ನಮಗೆ, ‘ನೀವು ಈ ಬೆಟ್ಟದ ಬಳಿಯಲ್ಲಿ ವಾಸಿಸಿದ್ದು ಸಾಕು.


ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.


ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು