ಧರ್ಮೋಪದೇಶಕಾಂಡ 2:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ತರುವಾಯ ಯೆಹೋವನು ನನಗೆ, “ಈಗ ನಾನು ಸೀಹೋನನನ್ನೂ ಮತ್ತು ಅವನ ದೇಶವನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಮಾಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ತರುವಾಯ ಸರ್ವೇಶ್ವರ ನನಗೆ, ‘ಈಗ ನಾನು ಸೀಹೋನನನ್ನೂ ಅವನ ನಾಡನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನ ಮಾಡಿಕೊಳ್ಳಲು ಶುರುಮಾಡಿರಿ,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ತರುವಾಯ ಯೆಹೋವನು ನನಗೆ - ಈಗ ನಾನು ಸೀಹೋನನನ್ನೂ ಅವನ ದೇಶವನ್ನೂ ನಿಮಗೆ ವಶಪಡಿಸುವದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರಾರಂಭಮಾಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಯೆಹೋವನು ನನಗೆ, ‘ನಾನು ನಿನಗೆ ಸೀಹೋನನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶಪಡಿಸಿಕೊ!’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇದಲ್ಲದೆ ಯೆಹೋವ ದೇವರು ನನಗೆ, “ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸುವುದಕ್ಕೆ ಆರಂಭಮಾಡಿದ್ದೇನೆ, ಅವನ ದೇಶವನ್ನು ಸೊತ್ತಾಗಿ ಹೊಂದುವಂತೆ ವಶಪಡಿಸಿಕೊಳ್ಳುವುದಕ್ಕೆ ಆರಂಭಮಾಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |