Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆ ಕಾಲದಲ್ಲಿ ನಾವು ಅವನ ಎಲ್ಲ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಂಡು, ಅವುಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು ಹಾಗು ಮಕ್ಕಳನ್ನು ನಿಶ್ಯೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವನಿಗೆ ಒಳಪಟ್ಟ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡೆವು. ಪ್ರತಿಯೊಂದು ಪಟ್ಟಣದಲ್ಲಿದ್ದ ಗಂಡಸರು, ಹೆಂಗಸರು, ಮಕ್ಕಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:34
15 ತಿಳಿವುಗಳ ಹೋಲಿಕೆ  

ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.


ಯೆಹೋವನು ಅವರನ್ನು ನಿಮಗೆ ಒಪ್ಪಿಸಲು ನೀವು ಅವರನ್ನು ಸಂಪೂರ್ಣವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು ಹಾಗು ಅವರಿಗೆ ಕನಿಕರ ತೋರಬಾರದು.


ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.


ಇಸ್ರಾಯೇಲರು ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ವಸ್ತುಗಳನ್ನೂ ಕೊಳ್ಳೆ ಹೊಡೆದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲ ಮಾಡಿದರು. ಉಸಿರಿರುವ ಒಂದನ್ನೂ ಅವರು ಉಳಿಸಲಿಲ್ಲ.


ಇಸ್ರಾಯೇಲ್ಯರು ನನ್ನ ನಿಬಂಧನೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಕೊಳ್ಳೆಯಲ್ಲಿ ಮೀಸಲಾದ ವಸ್ತುಗಳನ್ನು ಕದ್ದು ತಮ್ಮ ಸಾಮಾನುಗಳಲ್ಲಿ ಅಡಗಿಸಿಟ್ಟು ವಂಚಕರಾಗಿದ್ದಾರೆ.


ಅದು ಕೇವಲ ಯೆಹೋವನಿಂದ ನಾಶವಾಗತಕ್ಕದ್ದು. ಆದುದರಿಂದ ನೀವು ಅಂತಹ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ನೀವು ಅದನ್ನು ಅಸಹ್ಯಪಟ್ಟು ಮುಟ್ಟಲೂ ಬಾರದು.


ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳುಕಲ್ಲಿನ ಪ್ರದೇಶ, ಬೆಟ್ಟಗಳ ತಗ್ಗು ಪ್ರದೇಶ ಇವುಗಳನ್ನು ಸ್ವಾಧೀನಪಡಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್‍ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು