ಧರ್ಮೋಪದೇಶಕಾಂಡ 2:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವನ್ನು ಜಯಿಸಲು ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮತ್ತು ಕಣಿವೆಯಲ್ಲೇ ಇರುವ ಪಟ್ಟಣ ಇವುಗಳನ್ನು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೆ ಯಾವ ಪಟ್ಟಣವನ್ನು ಜಯಿಸಲೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ಅವುಗಳೆಲ್ಲ ನಮ್ಮ ಕೈಗೆ ಸಿಕ್ಕುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್‌ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |