ಧರ್ಮೋಪದೇಶಕಾಂಡ 2:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅಮ್ಮೋನಿಯರ ನಾಡನ್ನು ಮಾತ್ರ, ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶ ಮತ್ತು ಮಲೆನಾಡಿನ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರವಿುಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ. ಅಧ್ಯಾಯವನ್ನು ನೋಡಿ |