ಧರ್ಮೋಪದೇಶಕಾಂಡ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವದಕ್ಕಿದ್ದೀರಷ್ಟೆ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು. ಅಧ್ಯಾಯವನ್ನು ನೋಡಿ |