Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀ ಕೆಲಸವನ್ನು ಮಾಡುವ ಗುಲಾಮರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:11
16 ತಿಳಿವುಗಳ ಹೋಲಿಕೆ  

ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.


ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.


ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.


ಇಸ್ರಾಯೇಲ್ಯರಿಗಾಗಿ ಯೆಹೋವನು ಆರಿಸಿಕೊಂಡ ಸ್ಥಳದಲ್ಲಿ ಕಟ್ಟಲಾಗುವ ಆತನ ಯಜ್ಞವೇದಿಗೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ಹೊರುವವರನ್ನಾಗಿ ಅವರನ್ನು ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸವನ್ನು ಮಾಡಿಕೊಂಡು ಇಸ್ರಾಯೇಲ್ಯರೊಂದಿಗಿದ್ದಾರೆ.


ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.


ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.


ಅವರು ಯೆಹೋಶುವನಿಗೆ “ನಾವು ನಿಮ್ಮ ದಾಸರು” ಎಂದರು. ಯೆಹೋಶುವನು ಅವರನ್ನು “ನೀವು ಯಾರು? ಎಲ್ಲಿಯವರು?” ಎಂದು ವಿಚಾರಿಸಿದನು.


ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.


ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.


ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು