Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ನಾಡಿನ ಜನಾಂಗಗಳಿಗೆ ಸೇರದ ಹಾಗು ದೂರದ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೆ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮಿಂದ ಬಹುದೂರವಿರುವ ಪಟ್ಟಣಗಳಿಗೆ ಅಂದರೆ ನೀವು ವಾಸಿಸಲಿರುವ ದೇಶದಿಂದ ದೂರವಿರುವ ಪಟ್ಟಣಗಳಿಗೆ ನೀವು ಆ ರೀತಿಯಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಈ ದೇಶದ ಜನಾಂಗಗಳಿಗೆ ಸೇರದೆ ನಿಮಗೆ ದೂರವಾಗಿರುವ ಜನಾಂಗಗಳ ಪಟ್ಟಣಗಳಿಗೆಲ್ಲಾ ಹಾಗೆಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:15
5 ತಿಳಿವುಗಳ ಹೋಲಿಕೆ  

ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.


ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.


ಅವರು “ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಯೆಹೋವನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನು ಕೇಳಿದ್ದಾರೆ.


ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು