Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನೀವು ಒಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಲು ಅದಕ್ಕೆ ಬಹುದಿವಸ ಮುತ್ತಿಗೆ ಹಾಕಬೇಕಾಗಬಹುದು; ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕಾಗಿ ಅದಕ್ಕೆ ಬಹುದಿವಸ ಮುತ್ತಿಗೆಹಾಕಿರುವಾಗ ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನೀವು ಒಂದು ಪಟ್ಟಣವನ್ನು ಬಹುಕಾಲದಿಂದ ಮುತ್ತಿಗೆ ಹಾಕಿದರೆ ಸುತ್ತಮುತ್ತಲಿರುವ ಮರಗಳನ್ನು ಕಡಿದುಹಾಕಬಾರದು. ಅವುಗಳ ಫಲಗಳನ್ನು ತಿನ್ನಬಹುದು; ಆದರೆ ಕಡಿಯಬಾರದು. ಅವು ನಿಮ್ಮ ವೈರಿಗಳಲ್ಲವಲ್ಲಾ? ಅವು ನಿಮ್ಮೊಂದಿಗೆ ಯುದ್ಧ ಮಾಡುವುದಿಲ್ಲವಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದಕ್ಕೆ ಬಹು ದಿವಸ ಮುತ್ತಿಗೆ ಹಾಕಬೇಕಾಗಬಹುದು. ಆಗ ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು. ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧ ಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:19
11 ತಿಳಿವುಗಳ ಹೋಲಿಕೆ  

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.


ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.


ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.


ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.


ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.


ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು