ಧರ್ಮೋಪದೇಶಕಾಂಡ 20:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಳುಮಾಡಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧ ಆಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತಿನ್ನತಕ್ಕ ಹಣ್ಣು ಕೊಡುವದಿಲ್ಲವೆಂದು ನೀವು ತಿಳಿದ ಮರಗಳನ್ನು ಮಾತ್ರ ನೀವು ಕೆಡಿಸಬಹುದು, ಕಡಿಯಬಹುದು. ಅವುಗಳಿಂದ ಯುದ್ಧಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹಣ್ಣುಗಳನ್ನು ಕೊಡದ ಮರಗಳನ್ನು ಕಡಿಯಬಹುದು. ಆ ಮರಗಳಿಂದ ಆಯುಧಗಳನ್ನು ತಯಾರಿಸಿ ಆ ಪಟ್ಟಣದ ಜನರೊಂದಿಗೆ ಯುದ್ಧ ಮಾಡಬಹುದು. ಆ ಪಟ್ಟಣವು ನಿಮ್ಮ ಕೈವಶವಾಗುವ ತನಕ ನೀವು ಅದನ್ನು ಉಪಯೋಗಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಕಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು. ಅಧ್ಯಾಯವನ್ನು ನೋಡಿ |
ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.