Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು - ಯಾವನಾದರೂ ಧೈರ್ಯಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವದರಿಂದ ಅವನ ಜೊತೆಗಾರರೂ ದಿಗಿಲು ಪಟ್ಟಾರು ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆ ಲೇವಿಯ ಅಧಿಕಾರಿಗಳು ಹೇಳಬೇಕಾದದ್ದೇನೆಂದರೆ: ‘ನಿಮ್ಮಲ್ಲಿ ಯಾರಾದರೂ ತಮ್ಮ ಧೈರ್ಯವನ್ನು ಕಳೆದುಕೊಂಡಿದ್ದರೆ ಅವನು ತನ್ನ ಮನೆಗೆ ಹೋಗಲಿ. ಅವನಿಂದಾಗಿ ಇತರ ಸೈನಿಕರೂ ತಮ್ಮ ಧೈರ್ಯವನ್ನು ಕಳೆದುಕೊಳ್ಳಬಹುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:8
14 ತಿಳಿವುಗಳ ಹೋಲಿಕೆ  

ಆದುದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, ‘ಧೈರ್ಯವಿಲ್ಲದವರೂ, ಅಂಜುವವರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ ಎಂದು ಪ್ರಕಟಿಸು’” ಅಂದನು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.


ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.


ಯೇಸು ಅವನಿಗೆ, “ಯಾವನಾದರೂ ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡಿದರೆ ಅವನು ದೇವರ ರಾಜ್ಯಕ್ಕೆ ತಕ್ಕವನಲ್ಲ” ಎಂದು ಹೇಳಿದನು.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.


ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.


ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು.


ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.


ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು