Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತಂದೆಯಾದವನು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ತಾನು ಪ್ರೀತಿಸುವ ಹೆಂಡತಿಯ ಮಗನನ್ನೇ ಚೊಚ್ಚಲನೆಂದು ಭಾವಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಂದೆ ತನ್ನ ಆಸ್ತಿಯನ್ನು ಮಕ್ಕಳಿಗೆ ಸೊತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು, ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತಂದೆಯು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಪುರುಷನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುಮಾಡಿ ಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:16
10 ತಿಳಿವುಗಳ ಹೋಲಿಕೆ  

ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು.


ಆದರೆ ಯೆಹೂದನು ಎಲ್ಲಾ ಸಹೋದರರಲ್ಲಿ ಬಲಿಷ್ಠನಾದುದರಿಂದಲೂ, ರಾಜಾಧಿಕಾರವು ಇವನ ಕುಲಕ್ಕೆ ಬಂದುದರಿಂದಲೂ ಯೋಸೇಫನು ವಂಶಾವಳಿಯ ಪಟ್ಟಿಗಳಲ್ಲಿ ಚೊಚ್ಚಲ ಮಗನೆಂದು ಲಿಖಿತವಾಗಲಿಲ್ಲ. ಆದರೂ ಚೊಚ್ಚಲ ಮಗನಿಗೆ ಸಿಕ್ಕತಕ್ಕ ಪಾಲು ಅವನಿಗೆ ಸಿಕ್ಕಿತು.


ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ಇವರ ತಂದೆಯು ಇವರಿಗೆ ಯೆಹೂದದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನಲ್ಲದೆ ಬೆಳ್ಳಿ ಬಂಗಾರ, ಶ್ರೇಷ್ಠವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.


ಯಾಕೋಬನು ಅವನಿಗೆ, “ನೀನು ಮೊದಲು ನಿನ್ನ ಚೊಚ್ಚಲತನದ ಹಕ್ಕನ್ನು ನನಗೆ ಮಾರಿ ಬಿಡು” ಅನ್ನಲು.


ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ವೀರ್ಯಕ್ಕೆ ಪ್ರಥಮಫಲವೂ ಮತ್ತು ಚೊಚ್ಚಲುತನದ ಹಕ್ಕಿಗೆ ಬಾಧ್ಯನೂ ಆಗಿದ್ದಾನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು